
ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 1 ರಂದು ಸಾಧಾರಣ ಮಳೆಯಾಗಲಿದೆ, ಮುಂದಿನ ನಾಲ್ಕೈದು ದಿನಗಳ ಕಾಲ ಮುಂಗಾರು ಬಿರುಸಾಗಲಿದೆ. ಈ ಕುರಿತಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಮಾಹಿತಿ ಹಂಚಿಕೊಂಡಿದೆ.
ಸೆಪ್ಟೆಂಬರ್ ಆರರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿರುವ ಭಾರತೀಯ ಹವಾಮಾನ ಇಲಾಖೆ, ಸೆಪ್ಟೆಂಬರ್ 2 ಮತ್ತು 3 ರಂದು ಭಾರಿ ಮಳೆಯಾಗಲಿದೆ ಇದೆ ಎಂದು ಹೇಳಿದೆ.
ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲೂ ವ್ಯಾಪಕ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.







