
ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಮತ್ತು ಎಸ್ಕಾಂಗಳ ಅಧಿಕಾರಿ/ನೌಕರರಿಗೆ 2024-25 ನೇ ಹಣಕಾಸು ವರ್ಷಕ್ಕೆ ಬೋನಸ್/ಅನುಗ್ರಹ ಪೂರ್ವಕವನ್ನು ಮಂಜೂರು ಮಾಡುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ನಿರ್ದೇಶನ ನೀಡಿ, ಆರ್ಥಿಕ ಇಲಾಖೆ ಟಿಪ್ಪಣಿ ಸಂಬಂಧಿಸಿದಂತೆ, ಉಲ್ಲೇಖಿತ (1)ರ ಪ್ರಸ್ತಾವನೆಯನ್ನು ಪರಿಗಣಿಸಿ ,ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಮತ್ತು ಎಸ್ಕಾಂಗಳ ನೌಕರರಿಗೆ 2024-25ನೇ ಆರ್ಥಿಕ ವರ್ಷಕ್ಕೆ ಕನಿಷ್ಟ ತಲಾ ರೂ.7,000/- ರಂತೆ ಅನುಗ್ರಹ ಭತ್ಯೆಯನ್ನು (Ex-gratia) ನೀಡಬೇಕೆಂದು ಸೂಚಿಸಿದ್ದಾರೆ.
ಹಾಗೂ ಇದಕ್ಕೆ ತಗಲುವ ವೆಚ್ಚವನ್ನು ನಿಗಮಗಳ ಆಂತರಿಕ ಸಂಪನ್ಮೂಲಗಳಿಂದ ಭರಿಸುವ ಷರತ್ತಿಗೊಳಪಟ್ಟು ಉಲ್ಲೇಖಿತ (2)ರ ಟಿಪ್ಪಣಿಯಲ್ಲಿ ಆರ್ಥಿಕ ಇಲಾಖೆಯ ಸಹಮತಿ ನೀಡಲಾಗಿದೆ ಎಂದು ಇಂಧನ ಇಲಾಖೆಯ ಅಧೀನ ಕಾರ್ಯದರ್ಶಿ ವಿನೋದ್ ಕುಮಾರ್ ಡಿ.ಎಂ ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.







